ಅಹಮದಾಬಾದ್: ಮೆಡ್ರೋನ್ ತಯಾರಿಕಾ ಘಟಕದ ಮೇಲೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ದಾಳಿ ನಡೆಸಿ Rs 800 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಗುಜರಾತ್ನ ಭರೂಚ್ ಜಿಲ್ಲೆಯ ಔಷಧಿಯ ಕಾರ್ಖಾನೆಯೊಂದರಲ್ಲಿ ಇದೇ ರೀತಿಯ ಕಾರ್ಯಾಚರಣೆ ನಡೆಸಿದ್ದು, RS 31 ಕೋಟಿ ಮೌಲ್ಯದ ದ್ರವ ಟ್ರಾಮಾಡೋಲ್ ಅನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡೂ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಎಟಿಎಸ್ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಕಾಯ್ದೆಯಡಿಯಲ್ಲಿ ನಿಷೇಧಿಸಲಾದ ಈ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವ ನಾಲ್ವರನ್ನು ಬಂಧಿಸಿದೆ ಎಂದು ಉಪ ಪೊಲೀಸ್ ಮಹಾ ನಿರೀಕ್ಷಕ ಸುನೀಲ್ ಜೋಶಿ ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಭಿವಂಡಿ ಪಟ್ಟಣದ ಅಪಾರ್ಟ್‍ಮೆಂಟ್ ಮೇಲೆ ಎಟಿಎಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಮೊಹಮ್ಮದ್ ಯೂನಸ್ ಶೇಖ್ (41) ಮತ್ತು ಆತನ ಸಹೋದರ ಮೊಹಮ್ಮದ್ ಆದಿಲ್ ಶೇಖ್ (34) ಅವರನ್ನು ಸುಮಾರು 800 ಕಿಲೋಗ್ರಾಂಗಳಷ್ಟು ಮೆ-ಡ್ರೋನ್ (ಎಂಡಿ ಡ್ರಗ್ಸ್) ಸಹಿತವಾಗಿ ಬಂಧಿಸಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅದರ ಮೌಲ್ಯ 800 ಕೋಟಿಯಾಗಿದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296