ಚಾಮರಾಜನಗರ: ಕುಡಿದ ಮತ್ತಿನಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ.
ಸುಧಾಮಣಿ ಎಂಬವರು ತೀವ್ರವಾಗಿ ಗಾಯಗೊಂಡ ಮಹಿಳೆಯಾಗಿದ್ದಾರೆ. ಈಕೆಯ ಪತಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಬುಧವಾರ ತಡರಾತ್ರಿ ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದ ಪರಿಣಾಮ ತಲೆ, ಬೆನ್ನು ಹಾಗೂ, ಕೈಗಳಿಗೆ ತೀವ್ರ ಗಾಯಗಳಾಗಿವೆ.
ಗಾಯಳುವನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತಿದೆ.ಪತಿ ಕುಮಾರನನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


