nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026
    Facebook Twitter Instagram
    ಟ್ರೆಂಡಿಂಗ್
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಡಿಎಸ್‌ ಎಸ್ ಆಗ್ರಹ
    ಕೊರಟಗೆರೆ August 14, 2025

    ವಿಶೇಷ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವಂತೆ ಡಿಎಸ್‌ ಎಸ್ ಆಗ್ರಹ

    By adminAugust 14, 2025No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರ ಆ.16ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಡಿಎಸ್‌ ಎಸ್ ತಾ.ಸಂಚಾಲಕ ಡಿ.ಎಲ್.ಶಿವರಾಮ್ ಒತ್ತಾಯಿಸಿದರು.

    ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಆಯೋಗವನ್ನು ರಚಿಸಿ ವರದಿಯನ್ನು ಸ್ವೀಕರಿಸಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ವಿಳಂಬ ಮಾಡದೆ, ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು.

    ಪಿಎಲ್‌ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿ ವರ್ಗೀಕರಣದ ಬಗ್ಗೆ ಈಗಾಗಲೇ ಅನೇಕ ಕೂಗುಗಳು ಕೇಳಿ ಬರುತ್ತಿವೆ. ನಾಗಮೋಹನ್‌ ದಾಸ್‌ ರವರ ವರದಿಯ ಆಧಾರದ ಮೇಲೆ ಒಳಮೀಸಲಾತಿಯನ್ನು ಅಂಗೀಕರಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರಾದ ಡಾ.ಜಿ.ಪರಮೇಶ್ವರ್, ಮಹದೇವಪ್ಪನವರು ಒಳಮೀಸಲಾತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಜಾರಿಗೊಳಿಸುವುದರ ಬಗ್ಗೆ ತೀರ್ಮಾನಿಸಬೇಕಿದೆ ಎಂದು ಹೇಳಿದರು.

    ಮೀಸಲಾತಿ ಜಾರಿಗೆ ಜನಾಂದೋಲನ, ಪ್ರತಿಭಟನೆ, ತಮಟೆ ಚಳುವಳಿಯ ಮೂಲಕ ಹಲವು ಹೋರಾಟಗಳನ್ನು ಮಾಡಿದ್ದೇವೆ. ಬಲಗೈ ಜನಾಂಗದ ಸಹೋದರರು ಮೈಸೂರಿನ ಉರಿಲಿಂಗಿ ಪೆದ್ದ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮುಖಾಂತರ ಒಳಮೀಸಲಾತಿ ಜಾರಿಗೆ ವಿವಿಧಾತ್ಮಕ ಹೇಳಿಕೆ ನೀಡಿದ್ದಾರೆ, ಇದು ತರವಲ್ಲ. ದತ್ತಾಂಶಗಳ ವರದಿ ಆಧಾರದ ಮೇಲೆ ಮೀಸಲಾತಿ ಜಾರಿಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

    ದಲಿತ ಮುಖಂಡ ದಾಡಿ ವೆಂಕಟೇಶ್ ಮಾತನಾಡಿ, ಆಯಾ ರಾಜ್ಯ ಸರ್ಕಾರ ಪ.ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹೊರ ರಾಜ್ಯಗಳಲ್ಲಿ ಈಗಾಗಲೇ ಒಳ ಮೀಸಲಾತಿ ಜಾರಿಗೆ ಬಂದಿದೆ. ಚುನಾವಣೆಯ ಪ್ರಣಾಳಿಕೆಯಲ್ಲಿ ಅಂಶಗಳಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಒಳ ಮೀಸಲಾತಿ ಜಾರಿಗೆ ಬಂದಿಲ್ಲಾ ಎಂದು ಆರೋಪ ಮಾಡಿದರು.

    ರಾಜ್ಯ ಸರ್ಕಾರ ರಚಿಸಿದ ಆಯೋಗದ ವರದಿಯಲ್ಲಿ ಮಾದಿಗ ಸಮುದಾಯವು 18ಜಾತಿಗಳ ಸಂಖೈಯಲ್ಲಿ ಬಹುಸಂಖ್ಯಾತರಾಗಿದ್ದಾರೆ.

    ರಾಜ್ಯದಲ್ಲಿ ಮಾದಿಗ ಜನಾಂಗದ ಜನಸಂಖೈ 27 ಲಕ್ಷ ಇದೆ. ಛಲವಾದಿ ಜನಸಂಖೈ ಕಡಿಮೆ ಇರುವ ಕಾರಣ ಬಲಗೈ ಸಮುದಾಯದ ಜನರು ಸಹಿಸದೆ ಮೈಸೂರಿನ ಪೆದ್ದ ಮಠದ ಶ್ರೀಗಳ ಕಡೆಯಿಂದ ‘‘ಮಾದಿಗರು ಅಂಬೇಡ್ಕರ್ ವಾದಿಗಳಲ್ಲ’’ ಎಂಬ ಮಾತನ್ನು ಹೇಳಿಸುತ್ತಿದ್ದಾರೆ. ನಾಗಮೋಹನ್‌ ದಾಸ್ ವರದಿಯ ಪ್ರತಿಯನ್ನು ಸುಟ್ಟು ಒಳಮೀಸಲಾತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.

    ಈ ಸಂದರ್ಭದಲ್ಲಿ ದೊಡ್ಡಯ್ಯ ವಿಭಾಗೀಯ ಸಂಚಾಲಕ, ಜಿಲ್ಲಾ ಸಂಘಟನಾ ಸಂಚಾಲಕ ಗಂಗಣ್ಣ, ಮುಖಂಡರಾದ ಮಂಜುನಾಥ್, ಸಿದ್ದಗಂಗಯ್ಯ, ವೆಂಕಟಸ್ವಾಮಿ, ಹರೀಶ್‌ಬಾಬು, ನರಸಿಂಹಮೂರ್ತಿ, ಶಿವರಾಜು, ವೀರಕ್ಯಾತರಾಯ್ಯ, ಸುಬ್ಬಣ್ಣ, ದೊಡ್ಡಯ್ಯ, ನಾಗರಾಜು, ಭೀಮರಾಜು,ಲಕ್ಷ್ಮಿನರಸಯ್ಯ ಸೇರಿದಂತೆ ಇತರರು ಇದ್ದರು.

    ಸಮ ಸಮಾಜ ನಿರ್ಮಾಣಕ್ಕೆ ತಳಮಟ್ಟದ ಪ್ರತಿ ಸಮುದಾಯ ಜನರಿಗೆ ಒಳ ಮೀಸಲಾತಿ ಅವಶ್ಯಕತೆಯಿದೆ ಎಂದು ಅಂಬೇಡ್ಕರ್‌ರವರು ಒಪ್ಪಿಗೆ ನೀಡಿದ್ದರು, ಅಂಬೇಡ್ಕರ್ ವಾದಿಗಳು ಯಾರೆಂಬುದು ಶ್ರೀಗಳಿಂದ ಬಂದ ಮಾತುಗಳೇ ಸಾಕ್ಷಿ. ಆ.16 ರಂದು ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಯ ತೀರ್ಮಾನದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಮಹದೇವಪ್ಪ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ ನಮ್ಮ ಮಾದಿಗ ಸಮುದಾಯ.

    —  ದಾಡಿ ವೆಂಕಟೇಶ್, ದಲಿತ ಮುಖಂಡ.


    ಚುನಾವಣೆಯ ಪ್ರಣಾಳಿಕೆಯ ಅಧ್ಯಕ್ಷೆತೆ ವಹಿಸಿದ್ದ ಡಾ.ಜಿ.ಪರಮೇಶ್ವರ್‌ ರವರು ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸುವ ಭರವಸೆ ನೀಡಿದ್ದರು. ಪ.ಜಾತಿ ದತ್ತಾಂಶ ಸಂಗ್ರಹಣೆಗೆ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸಂಗ್ರಹಣೆ ಮಾಡಿದೆ. ಮೈಸೂರಿನ ಪೆದ್ದ ಮಠದ ಶ್ರೀಗಳು ಸಮುದಾಯದ ವಿರುದ್ಧ ನೀಡಿರುವ ಹೇಳಿಕೆ ಹಿಂಪಡೆಯಬೇಕು. ದತ್ತಾಂಶ ಸಂಗ್ರಹಣೆಯ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತರಬೇಕಿದೆ.

    —  ಜೆಟ್ಟಿ ಅಗ್ರಹಾರ ನಾಗರಾಜು, ರಾಜ್ಯ ಸಂಚಾಲಕ, ದಲಿತ ಸಂರಕ್ಷಣಾ ಸಮಿತಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    ಹೊಳೆನರಸೀಪುರ / ಹಳ್ಳಿಮೈಸೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಹಳ್ಳಿಮೈಸೂರಿನ ಸ್ಥಳೀಯ ಸರ್ಕಾರಿ ಸಾರ್ವಜನಿಕ…

    ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?

    August 28, 2026

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.