ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ.
ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ ಅಂಗಡಿ ಮುಂದೆ ಕುಳಿತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಬುಧವಾರ ಮಧ್ಯಾಹ್ನ 1 ಗಂಟೆ ವೇಳೆ ಅಂಗಡಿ ಬಳಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಕುರಿ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ.
ಘಟನೆ ಸಂಬಂಧ ಗುಬ್ಬಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB