ತುಮಕೂರು: ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ, , ಪ.ಪಂ. ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
50 ವರ್ಷ ವಯಸ್ಸಿನ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರರು ಟೀ ಅಂಗಡಿ ಬಳಿಯಲ್ಲಿ ಕುಳಿತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿತ್ತು.
ನರಸಿಂಹಮೂರ್ತಿ ಅವರ ಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಈ ಘಟನೆ ಗುಬ್ಬಿ ಜನತೆಯನ್ನು ಬೆಚ್ಚಿಬೀಳಿಸಿದೆ. ನರಸಿಂಹ ಮೂರ್ತಿ ಅವರ ಮೇಲೆ ದುಷ್ಕರ್ಮಿಗಳು ಮನಬಂದಂತೆ ಮಾರಕಾಸ್ತ್ರಗಳಿಂದ ಚುಚ್ಚಿದ್ದರು. ಮುಖದ ಗುರುತೇ ಸಿಗದಂತೆ ಕೊಚ್ಚಿದ್ದು, ಅಂಗೈಯನ್ನು ಕತ್ತರಿಸಿದ್ದಾರೆ. ಇದೊಂದು ಅತ್ಯಂತ ಭಯಾನಕ ಕೊಲೆಯಾಗಿದ್ದು, ಸಾರ್ವಜನಿಕರು ಈ ಕೊಲೆಯಿಂದಾಗಿ ತೀವ್ರ ಆತಂಕಕ್ಕೊಳಗಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿದಂತೆ ಐವರನ್ನು ಬುಧವಾರ ರಾತ್ರಿಯೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಘಟನೆಯ ಹಿಂದಿನ ಕಾರಣ ಏನು? ಮತ್ತು ಈ ಕೊಲೆಯ ಹಿಂದಿರುವವರನ್ನು ಬಯಲಿಗೆಳೆದು ಕಠಿಣ ಶಿಕ್ಷೆ ವಿಧಿಸಬೇಕು ಎಂದು ತೀವ್ರ ಒತ್ತಾಯ ಕೇಳಿ ಬಂದಿದೆ. ಘಟನೆ ವಿರುದ್ಧ ತೀವ್ರ ಪ್ರತಿಭಟನೆ ನಡೆಯುವ ಸಾಧ್ಯತೆಗಳು ಕಂಡು ಬಂದಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz