ಬೀದರ್: ಸಂತಪೂರ ವಲಯ ಅರಣ್ಯ ಅಧಿಕಾರಿಗಳು ಸರಿಯಾಗಿ ಕಚೇರಿಗೆ ಬರುತ್ತಿಲ್ಲ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಮತ್ತು ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಸಂಘಟನೆ ಔರಾದ್ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಸಂತಪೂರ ವಲಯ ಅರಣ್ಯ ಅಧಿಕಾರಿಗಳು ಇವರು ಸರಿಯಾಗಿ ಕಚೇರಿಗೆ ಬರುತ್ತಿಲ್ಲ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಔರಾದ (ಬಾ) ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸವಾಗಿರುವ ಬಗ್ಗೆ ಹಾಗೂ ಔರಾದ( ಬಾ) ತಾಲೂಕಿನಲ್ಲಿ ತೋಳ ಮತ್ತು ಜಿಂಕೆಗಳ ಹಾವಳಿ ತಡೆಗಟ್ಟುವ ಬಗ್ಗೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ತುಕಾರಾಮ ಹಸನ್ಮುಖಿ ತಾಲೂಕು ಅಧ್ಯಕ್ಷರು ದಲಿತ ಸಂಘರ್ಷ ಸಮಿತಿ ಭೀಮ ಮಾರ್ಗ ಔರಾದ, ನವನಾಥ ಚಟ್ನಾಳ, ಮಲ್ಲಿಕಾರ್ಜುಜೋನೇಕೇರಿ , ಪ್ರಕಾಶ್ ಕಾಂಬಳೆ, ಪ್ರವೀಣ್ ಜೀರಗಾ, ಬಸವರಾಜ್ ಲಾದಾ, ಗೌತಮ್ ಜೀರಗಾ ಮತ್ತಿತರರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


