ಕೊರಟಗೆರೆಯಲ್ಲಿ ಇಂದು ಮಧ್ಯಾಹ್ನ ಭಾರೀ ಗಾಳಿ ಮಳೆ ಅವಾಂತರ ಸೃಷ್ಟಿ ಮಾಡಿದ್ದು, ವೇಗವಾಗಿ ಬೀಸಿದ ಗಾಳಿ ಮಳೆಗೆ ಮರ, ನಾಲ್ಕು ವಿದ್ಯುತ್ ಕಂಬಗಳು, ಒಂದು ತೆಂಗಿನ ಮರ ಧರೆಗುರುಳಿದೆ.
ಕೊರಟಗೆರೆ ಪಟ್ಟಣದ ಹುಲಿಕುಂಟೆ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೂದಲೆಳೆಯಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
ಪಟ್ಟಣದ ಹಲವು ಭಾಗದಲ್ಲಿ ಕೆಲ ಘಟನೆಗಳು ನಡೆದಿವೆ. ಭೀಕರ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಘಟನೆಯಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರು ಪರದಾಡಿದರು.
ಬಳಿಕ ಬೆಸ್ಕಾಂ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಸೇರಿ ಮರ ವಿದ್ಯುತ್ ಕಂಬ ವಿದ್ಯುತ್ ತಂತಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ತಾಲೂಕಿನಲ್ಲಿ ಅಬ್ಬರದ ಗಾಳಿಯ ಜೊತೆಗೆ ಭೀಕರ ಮಳೆಯ ಆರ್ಭಟ ಜೋರಾಗಿದ್ದು, ಸ್ಥಳಕ್ಕೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ..
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA