ಸಿಎಂ ಆಪ್ತ ಕಾರ್ಯದರ್ಶಿಗಳ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿದ ಪ್ರಕರಣ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ. ವೆಂಕಟೇಶಯ್ಯ ಅವರು ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ. ವೆಂಕಟೇಶಯ್ಯ ಅವರು ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗಿದೆ.
ನಕಲಿ ಲೆಟರ್ ಹೆಡರ್ ಸೃಷ್ಟಿಸಿ ಸಿಎಂ ಕಚೇರಿಯಿಂದ ಲೋಕೋಪಯೋಗಿ ಸಚಿವರಿಗೆ ಕಡತವೊಂದನ್ನು ಕಳುಹಿಸಲಾಗಿದೆ. ಈ ಕಡತದಲ್ಲಿ ರಾಜೇಂದ್ರ ಹೆಸರಿನಲ್ಲಿ ಸಹಿ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


