ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ ನಿಮಿತ್ತ ಪಾದಯಾತ್ರೆಗೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.
ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿಯಾಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್ ಫ್ಲೈಓವರ್ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಗಾಯಾಳು ಮಹಾಂತೇಶ್ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


