ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ನಡೆಸಲಾಗುತ್ತಿರುವ ತುಮಕೂರು ದಸರಾ ಕಾರ್ಯಕ್ರಮವನ್ನು ವೈಭವಯುತವಾಗಿ ಆಚರಿಸಲು ಅಗತ್ಯ ರೂಪುರೇಷೆಗಳನ್ನು ತಯಾರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ತುಮಕೂರು ದಸರಾ ಆಚರಣೆ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ತುಮಕೂರು ದಸರಾ ಆಚರಣೆ ಅಂಗವಾಗಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಯುವ ದಸರಾ ಹಾಗೂ ಜಿಲ್ಲೆಯ ಸ್ಥಳೀಯ ಕಲಾವಿದರಿಂದ ಪ್ರತಿನಿತ್ಯ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಜಿಲ್ಲೆಯ ಪ್ರಸಿದ್ದ ಕಲಾವಿದರನ್ನು ಸನ್ಮಾನಿಸಲಾಗುತ್ತದೆ.
ನಗರದ ಟೌನ್ ಹಾಲ್ ಸರ್ಕಲ್ನಿಂದ ಶಿವಕುಮಾರ ಸ್ವಾಮೀಜಿ ಸರ್ಕಲ್ವರೆಗೆ ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸುವುದರ ಜೊತೆಗೆ ನಗರದ ಪ್ರಮುಖ ಬೀದಿ, ವೃತ್ತಗಳು ಮತ್ತು ನಗರದಲ್ಲಿ 100 ವರ್ಷ ಪೂರೈಸಿದ ಸರ್ಕಾರಿ ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q