nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ

    August 3, 2026

    ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!

    August 3, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    • ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಬಾಲ್ ನುಂಗಿ ಉಸಿರುಗಟ್ಟಿ ಬಾಲಕ ದಾರುಣ ಸಾವು
    • ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
    • ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
    • ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
    • ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲಿ ದಸರಾ ಕ್ರೀಡಾಕೂಟ ಸ್ಪರ್ಧೆ: ಇಲ್ಲಿದೆ ಸಂಪೂರ್ಣ ವಿವರ
    ತುಮಕೂರು September 19, 2024

    ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲಿ ದಸರಾ ಕ್ರೀಡಾಕೂಟ ಸ್ಪರ್ಧೆ: ಇಲ್ಲಿದೆ ಸಂಪೂರ್ಣ ವಿವರ

    By adminSeptember 19, 2024No Comments2 Mins Read
    sports

    ತುಮಕೂರು:  ಜಿಲ್ಲೆಯ 10 ತಾಲ್ಲೂಕುಗಳಲ್ಲಿ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ ಸೆಪ್ಟೆಂಬರ್ 21 ರಿಂದ 24ರವರೆಗೆ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

    ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆಪ್ಟೆಂಬರ್ 21ರಂದು ಜಿಲ್ಲೆಯ ಪಾವಗಡ ಹಾಗೂ ಕೊರಟಗೆರೆ ತಾಲ್ಲೂಕು ಕ್ರೀಡಾಂಗಣ; ಸೆಪ್ಟೆಂಬರ್ 23ರಂದು ಕುಣಿಗಲ್ ತಾಲ್ಲೂಕು ಕ್ರೀಡಾಂಗಣ, ಶಿರಾ ತಾಲ್ಲೂಕಿನ ಶ್ರೀ ವಿವೇಕಾನಂದ ತಾಲ್ಲೂಕು ಕ್ರೀಡಾಂಗಣ, ಚಿ.ನಾ.ಹಳ್ಳಿ ತಾಲ್ಲೂಕು ಕ್ರೀಡಾಂಗಣ ಹಾಗೂ ತುರುವೇಕೆರೆ ತಾಲ್ಲೂಕು ಕ್ರೀಡಾಂಗಣ; ಸೆ.24ರಂದು ತಿಪಟೂರು ಕಲ್ಪತರು ತಾಲ್ಲೂಕು ಕ್ರೀಡಾಂಗಣ, ತುಮಕೂರು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಗುಬ್ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಹಾಗೂ ಮಧುಗಿರಿ ರಾಜೀವ್ ಗಾಂಧಿ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆಸಕ್ತ ಕ್ರೀಡಾಕೂಟ ನಡೆಯುವ ಒಂದು ದಿನ ಮುಂಚಿತವಾಗಿ ನೋಂದಾಯಿಸಿಕೊಳ್ಳತಕ್ಕದ್ದು.

    ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಪಾವಗಡ ಮೊ.ಸಂ.9741626791; ಕೊರಟಗೆರೆ-8217043366; ಕುಣಿಗಲ್-7259938630; ಶಿರಾ-9731526412; ಚಿ.ನಾ.ಹಳ್ಳಿ-9880440175; ತುರುವೇಕೆರೆ-6363406839; ತಿಪಟೂರು-8660356249; ತುಮಕೂರು-6360720198; ಗುಬ್ಬಿ-7619626939/9901009501; ಮಧುಗಿರಿ-9535340677ನ್ನು ಸಂಪರ್ಕಿಸಬಹುದಾಗಿದೆ.

    ತಾಲ್ಲೂಕು ಮಟ್ಟದಲ್ಲಿ ಆಯೋಜಿಸುವ ಸ್ಪರ್ಧೆಗಳ ವಿವರ:

    ಅಥ್ಲೆಟಿಕ್ಸ್ ಸ್ಪರ್ಧೆ: ಪುರುಷ ವಿಭಾಗದಲ್ಲಿ 100, 200, 400, 800, 1500, 5000, 10000 ಮೀ. ಓಟ, 110 ಮೀ. ಹರ್ಡಲ್ಸ್ 4×100 ಮೀ. ರಿಲೇ, 4×400 ಮೀ. ರಿಲೇ. ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ(ಟ್ರಿಪಲ್ ಜಂಪ್), ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ. ಮಹಿಳಾ ವಿಭಾಗದಲ್ಲಿ 100, 200, 400, 800, 1500, 3000 ಮೀ. ಓಟ, 100 ಮೀ ಹರ್ಡಲ್ಸ್, 4×100 ಮೀ. ರಿಲೇ, 4×400 ಮೀ. ರಿಲೇ. ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ(ಟ್ರಿಪಲ್ ಜಂಪ್), ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ ಪಂದ್ಯಗಳು ನಡೆಯಲಿವೆ.

    ಗುಂಪು ಕ್ರೀಡಾ ಸ್ಪರ್ಧೆ : ಪುರುಷ ವಿಭಾಗದಲ್ಲಿ ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್, ಫುಟ್ಬಾಲ್, ಯೋಗ ಸ್ಪರ್ಧೆಗಳು ನಡೆಯಲಿವೆ. ಮಹಿಳಾ ವಿಭಾಗದಲ್ಲಿ ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್, ಯೋಗ(ವೀರಭದ್ರಾಸನ, ಜಾನು ಶಿರಶಾಸನ, ಹಲಾಸನ ಮತ್ತು ಧನುರಾಸನ).

    ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಆಯಾ ತಾಲ್ಲೂಕು ಕ್ರೀಡಾಪಟುಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ನೊಂದಿಗೆ ತಮ್ಮ ತಾಲ್ಲೂಕಿನಲ್ಲಿ ನಡೆಯುವ ಸ್ಪರ್ಧೆಗಳಲ್ಲಿ ಭಾಗವಹಿಸತಕ್ಕದ್ದು. ದಸರಾ ಕ್ರೀಡಾಕೂಟದಲ್ಲಿ ಒಮ್ಮೆ ಒಂದು ತಾಲ್ಲೂಕಿನಿಂದ ಸ್ಪರ್ಧಿಸಿದ ಸ್ಪರ್ಧಿಗಳು (ಸೋಲಿರಲಿ/ ಗೆಲುವಿರಲಿ) ರಾಜ್ಯದ ಬೇರೆ ಯಾವುದೇ ತಾಲ್ಲೂಕಿನಿಂದ ಮತ್ತೊಮ್ಮೆ ಸ್ಪರ್ಧಿಸುವಂತಿಲ್ಲ. ಕ್ರೀಡಾಪಟುಗಳು ಸ್ಪರ್ಧಾ ದಿನಾಂಕಗಳಂದು ಬೆಳಿಗ್ಗೆ 9 ಗಂಟೆಗೆ ಹಾಜರಿರಬೇಕು. ಸ್ಪರ್ಧಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು. ಕ್ರೀಡಾಪಟುಗಳಿಗೆ ಮಧ್ಯಾಹ್ನದ ಲಘು-ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು.

    ತುಮಕೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೇರವಾಗಿ ಆಯೋಜಿಸುವ ಸ್ಪರ್ಧೆಗಳು :

    ಮೇಲಿನ ಎಲ್ಲಾ 7 ಸ್ಪರ್ಧೆಗಳ ಜೊತೆಗೆ ಬಾಸ್ಕೆಟ್ ಬಾಲ್, ಕುಸ್ತಿ, ಹಾಕಿ, ಬ್ಯಾಡ್ ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್ ಸೇರಿದಂತೆ 15 ಕ್ರೀಡೆಗಳನ್ನು ಆಯೋಜಿಸಲಾಗುವುದು. (ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಪಾದ ಹಸ್ತಾನಸ, ಆಕರ್ಣ ಧನುರಾಸನ, ಊರ್ದೈ ಧನುರಾಸನ ಮತ್ತು ಅರ್ಧ ಮತ್ಸೇಂದ್ರಿಯ ಆಸನ). ಟೆನ್ನಿಸ್, ನೆಟ್ಬಾಲ್ ಮತ್ತು ಈಜು ಸ್ಪರ್ಧೆಗಳ ಆಸಕ್ತ ಕ್ರೀಡಾಪಟುಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿ ವಿಭಾಗ ಮಟ್ಟಕ್ಕೆ ಕಳುಹಿಸಿ ಕೊಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9741691379) ಅವರನ್ನು ಸಂಪರ್ಕಿಸಬೇಕೆಂದು ಕೋರಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಬೆಂಗಳೂರು: ರಾಜ್ಯದ ಭೂಮಿ, ನೀರು ಮತ್ತು ಭಾಷೆಗೆ ಸಂಬಂಧಿಸಿದ ಗಂಭೀರ ವಿಚಾರಗಳು ಎದುರಾದಾಗ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕರ್ನಾಟಕದ ಹಿತಕ್ಕಾಗಿ…

    ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ

    August 3, 2026

    ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!

    August 3, 2026

    ಕುರ್ ಕುರೆ ಪ್ಯಾಕೆಟ್ ನಲ್ಲಿದ್ದ ಆಟಿಕೆ ಪ್ಲಾಸ್ಟಿಕ್ ಬಾಲ್ ನುಂಗಿ ಉಸಿರುಗಟ್ಟಿ ಬಾಲಕ ದಾರುಣ ಸಾವು

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.