ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತುಮಕೂರು ದಸರಾ ಉತ್ಸವ 2024ರ ಅಂಗವಾಗಿ ಅಕ್ಟೋಬರ್ 11ರಂದು ವಿವಿಧ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಬೆಳಿಗ್ಗೆ 6 ರಿಂದ 9:30 ಗಂಟೆಯವರೆಗೆ ಮಿನಿ ಮ್ಯಾರಥಾನ್, ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಚೆಸ್ ಕ್ರೀಡೆಗಳು ನಡೆಯಲಿವೆ.
ಅದೇ ದಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 10 ಗಂಟೆಯವರೆಗೆ ಕಬಡ್ಡಿ, ಖೋ–ಖೋ, ವಾಲಿಬಾಲ್, ಕುಸ್ತಿ ಪಂದ್ಯಾವಳಿಗಳು ನಡೆಯಲಿವೆ.
ಆಸಕ್ತ ಕ್ರೀಡಾಪಟುಗಳು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9035030273) ಅವರನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296