nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ಉತ್ಸವಕ್ಕೆ ದಿನಗಣನೆ ಮೈಸೂರಿನಲ್ಲಿ ಯಾವ ದಿನ ಏನು ಸಂಭ್ರಮ?: ಪಟ್ಟಿ ಇಲ್ಲಿದೆ ನೋಡಿ
    ರಾಜ್ಯ ಸುದ್ದಿ October 5, 2023

    ದಸರಾ ಉತ್ಸವಕ್ಕೆ ದಿನಗಣನೆ ಮೈಸೂರಿನಲ್ಲಿ ಯಾವ ದಿನ ಏನು ಸಂಭ್ರಮ?: ಪಟ್ಟಿ ಇಲ್ಲಿದೆ ನೋಡಿ

    By adminOctober 5, 2023No Comments2 Mins Read
    dasara

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.

    ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ.


    Provided by
    Provided by

    ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ ನೆರವೇರಲಿದೆ. ಇದಾದ ಬಳಿಕ ಬೆಳಗ್ಗೆ 11:30ರಿಂದ 11:50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಅಂದು ಮಧ್ಯಾಹ್ನ 1:45 ರಿಂದ 02:05ರ ಅವಧಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಾಗುತ್ತದೆ.

    ಅ.20 ರಂದು 10:05 ರಿಂದ 10:25ಕ್ಕೆ ಸರಸ್ವತಿ ಪೂಜೆ, ಅ.21 ರಂದು ಕಾಳರಾತ್ರಿ ಪೂಜೆ, ಅ.22 ರಂದು ದುರ್ಗಾಷ್ಠಮಿ ಪೂಜೆ, ಅ.23 ರಂದು ದುರ್ಗಾಷ್ಠಮಿ ಪೂಜೆ ನಡೆಯಲಿದೆ. ಅದೇ ದಿನ ಬೆಳಗ್ಗೆ 5:30ಕ್ಕೆ ಚಂಡಿ ಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಆ ಸಮಯದಲ್ಲಿ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.

    ಬಳಿಕ ಬೆಳಗ್ಗೆ 6:05 ರಿಂದ 06:15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಆಗಲಿವೆ. ಬೆಳಗ್ಗೆ 07:15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ತರಲಾಗುತ್ತದೆ. ಬೆಳಗ್ಗೆ 9:30ಕ್ಕೆ ಚಂಡಿಹೋಮ ಪೂರ್ಣಾಹುತಿ ನಡೆಯಲಿದೆ. ಬೆಳಗ್ಗೆ 11:45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಬರಲಿವೆ. ಬಳಿಕ ಮಧ್ಯಾಹ್ನ 12:20ಕ್ಕೆ ಆಯುಧ ಪೂಜೆ ಆರಂಭವಾಗಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನಡೆಯಲಿದೆ.

    ಬಳಿಕ ಸಂಜೆ ಖಾಸಗಿ ದರ್ಬಾರ್ ಇರಲಿದೆ. ನಂತರ ಸಿಂಹ ವಿಸರ್ಜನೆ, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಆಗಲಿದೆ. ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ಮಾಡಿ, ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮಲದೇವಿ ದರ್ಶನ ಪಡೆಯಲಿದ್ದಾರೆ.

    ಅ.24 ರಂದು ವಿಜಯದಶಮಿ ಆಚರಣೆ ನಡೆಯಲಿದೆ. ಬೆಳಗ್ಗೆ 9:45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 11 ರಿಂದ 11:40ರ ವೇಳೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ನಡೆಯಲಿದೆ. ಬಳಿಕ ಭುವನೇಶ್ವರಿ ದೇಗುಲದಲ್ಲಿ ಶಮಿ ಪೂಜೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಲಿದ್ದಾರೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.