ಬೆಂಗಳೂರು: ಕರ್ನಾಟಕ ರಾಜ್ಯ ಹೈಕೋರ್ಟ್ಗೆ ಅಕ್ಟೋಬರ್ 16ರಿಂದ 21ರವರೆಗೆ ದಸರಾ ರಜೆ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಎದುರಾಗುವ ತುರ್ತು ಅರ್ಜಿಗಳ ವಿಚಾರಣೆಗಾಗಿ ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿ ಕರ್ತವ್ಯ ನಿರ್ವಹಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ನ್ಯಾಯಿಕ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅವರು ಈ ವಿಷಯವನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದರ ಜತೆಗೆ ರಜಾಕಾಲೀನ ಪೀಠಗಳ ವಿವರವನ್ನೂ ಒದಗಿಸಿದ್ದಾರೆ.


