ನವದೆಹಲಿ: ಕ್ಯಾನ್ಸರ್ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಇಮ್ಯೂನೋಥೆರಪಿಗೆ ಬಳಸುವ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಈ ಔಷಧಗಳ ಮತ್ತು ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿ ನೀಡುವಂತೆ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ಮಂಜುನಾಥ್ ಅವರು ಹೇಳಿದ್ದಾರೆ.
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಹಣಕಾಸು ಸಚಿವರು, ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವ ಭರವಸೆ ನೀಡಿದ್ದಾರೆ ಎಂದು ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC