ತುಮಕೂರು: ಜನ್ಮ ನೀಡಿದ ತಂದೆ ತಾಯಂದಿರಿಗೆ ಗೌರವ ನೀಡಿ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ತುಮಕೂರು ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ನೂರುನ್ನೀಸ ಅವರು ಕರೆ ನೀಡಿದರು.
ತುಮಕೂರು ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಿದ್ದಾರ್ಥ ಸಂಕಲ್ಪ– 2024 ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ನ್ಯಾಯಾಧೀಶರು ಮಾತನಾಡಿದರು.
ಈ ವೇಳೆ ಕಾಲೇಜಿನಲ್ಲಿ 2021 ರಿಂದ 24 ವರೆಗೆ ವಿದ್ಯಾಭ್ಯಾಸ ಮಾಡಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಸನ್ಮಾನ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ, ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಆರ್., ಸಹಾಯಕ ಆಡಳಿತ ಅಧಿಕಾರಿ ಖಲಂದರ್ ಪಾಷಾ, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ರಮೇಶ್ ಮಣ್ಣಿ, ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296