ಚಿತ್ರದುರ್ಗ: ಹೃದಯಾಘಾತದಿಂದ ಡಿವೈಎಸ್ ಪಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಾಕಿಂಗ್ ಮುಗಿಸಿ ಮನೆಗೆ ತೆರಳಿದ್ದ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಡಿವೈಎಸ್ಪಿ ರಮೇಶ (52) ಅವರನ್ನು ತಕ್ಷಣವೇ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಿಸದೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಡಿಸಿಆರ್ ಬಿ ಮತ್ತು ಡಿವೈಎಸ್ ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ್, 1998 ಬ್ಯಾಚ್ನಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಸದ್ಯ ಬಸವೇಶ್ವರ ಆಸ್ಪತ್ರೆಗೆ ಎಸ್ಪಿ ಜಿ.ರಾಧಿಕಾ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700