ಪಾವಗಡ: ಪಟ್ಟಣದ ಬಳ್ಳಾರಿ ರಸ್ತೆಯ ಪಕ್ಕದಲ್ಲಿರುವ ಅಹಿಂದ ಕಚೇರಿಯಲ್ಲಿ ಅಹಿಂದ ಒಕ್ಕೂಟದ ಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಅಧ್ಯಕ್ಷರ ಮಾರ್ಗದರ್ಶನದಂತೆ, ಅಹಿಂದ ಒಕ್ಕೂಟದ ಸಂಪೂರ್ಣ ಬೆಂಬಲವನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಚಂದ್ರಪ್ಪನವರನ್ನು ಘೋಷಿಸಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಹಿಂದ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಇ. ರವಿಕುಮಾರ್ ರವರು, ನಾನು ಪಾವಗಡ ತಾಲೂಕಿನ ಅಹಿಂದ ಘಟಕದ ಅಧ್ಯಕ್ಷನಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇಂದು ಸಭೆ ಕರೆದಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮತ್ತು ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ತೀರ್ಮಾನಿಸಲಾಗಿದೆ. ಅದರಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು, ಹೊಂದಿರುವ ಬಿ.ಎಂ. ಚಂದ್ರಪ್ಪನವರಿಗೆ ಅತಿ ಹೆಚ್ಚು ಮತಗಳನ್ನು ಹಾಕುವುದರ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಪಾವಗಡ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಶಾಸಕರಾದ ವೆಂಕಟೇಶ್ ಮತ್ತು ಮಾಜಿ ಸಚಿವ ವೆಂಕಟರಮಪ್ಪನವರ ನೇತೃತ್ವದಲ್ಲಿ ಪ್ರಬಲವಾಗಿದ್ದು, ಅವರ ಮಾರ್ಗದರ್ಶನದಂತೆ ನಾನು ಕೂಡ ಕೆಲಸ ಮಾಡುತ್ತಿದ್ದು, ಅವರ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ.
ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ದೇವರಾಜ್ ಅರಸುರವರ ಅನುಯಾಯಿ ಸಿದ್ದರಾಮಯ್ಯರವರ ಗ್ಯಾರಂಟಿ ಯೋಜನೆಗಳು, ಪ್ರತಿಯೊಬ್ಬರ ಮನ ಮನೆ ಮುಟ್ಟಿದೆ. ಅವುಗಳ ಜೊತೆಗೆ ಮತ್ತೈದು ಗ್ಯಾರಂಟಿಗಳನ್ನು ಜಾರಿಗೆ ತರಲು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದ ತಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.
ನಂತರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಹಿಂದ ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು ಸಾರ್ವಜನಿಕರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296