ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿನಿರ್ದೇಶನಾಲಯ (ಇಡಿ) ಮುಡಾ ಅಧಿಕಾರಿಗಳಿಗೆ ದಾಖಲೆ ನೀಡಲು ನೋಟೀಸ್ ಜಾರಿ ಮಾಡಿದೆ.
ಈಗಾಗಲೇ ಇಡಿ ಪ್ರಕರಣಕ್ಕೆ ಸಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ವಿರುದ್ಧ ಇಸಿಐಆರ್ ದಾಖಲಿಸಿತ್ತು. ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಕೇಂದ್ರ ಬಿಂದು ಆಗಿರುವ ಮುಡಾ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿರುವ ಇಡಿ ಮೂರರಿಂದ 4 ದಿನದೊಳಗೆ ಸಂಭಂಧಪಟ್ಟ ದಾಖಲೆಗಳನ್ನು ನೀಡಬೇಕೆಂದು ಸೂಚನೆ ಕೊಟ್ಟಿದೆ.
ಮೈಸೂರಿನ ಕೆಸರೆ ಗ್ರಾಮದಲ್ಲಿ 50:50ರ ಅನುಮಪಾತದಲ್ಲಿ ನಿವೇಶನ ಹಂಚಿಕೆ ಸಂಭಂದ ಕೇಳಿಬಂದಿರುವ ಆರೋಪಗಳ ಕುರಿತು ಸಮಗ್ರವಾದ ದಾಖಲೆಗಳನ್ನು ಒದಗಿಸಬೇಕು. ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ನಾಲ್ಕು ದಿನದೊಳಗೆ ದಾಖಲೆಗಳನ್ನು ತರಬೇಕೆಂದು ಮುಡಾ ಆಯುಕ್ತರಿಗೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮೈಸೂರು ನಗರದಿಂದ 15 ಕಿ.ಮೀ ದೂರದಲ್ಲಿರುವ ಕೆಸರೆ ಗ್ರಾಮದಲ್ಲಿ ಮುಖ್ಯಮಂತ್ರಿ ಪತ್ನಿಗೆ ಪರ್ಯಾಯ ನಿವೇಶನ ನೀಡಬೇಕಾದಲ್ಲಿ ಯಾವುದಾದರೂ ಬಡಾವಣೆಯನ್ನು ನೀಡುವ ಬದಲು 1991ರಲ್ಲಿ ನಿರ್ಮಾಣವಾದ ವಿಜಯನಗರದ 3ನೇ ಹಂತದಲ್ಲಿ ನಿವೇಶನ ನೀಡಿರುವ ಬಗ್ಗೆ ದಾಖಲೆಗಳನ್ನು ಒದಗಿಸಬೇಕೆಂದು ನೋಟಿಸ್‌ನಲ್ಲಿ ಸೂಚನೆ ಕೊಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296