ತುಮಕೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ನೋಂದಣಿಗಾಗಿ ರೂಪಿಸಿದ್ದ ಇ–ಆಸ್ತಿ ತಂತ್ರಾಂಶವನ್ನು ಕಾವೇರಿ ತಂತ್ರಾಂಶಕ್ಕೆ ಸಂಯೋಜನೆ ಮಾಡಲಾಗಿದ್ದು, ಅಕ್ಟೋಬರ್ 7 ರಿಂದ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿಗಳನ್ನು ಇ–ತಂತ್ರಾಂಶದ ಮೂಲಕ ನೋಂದಣಿ ಮಾಡಲಾಗುವುದು. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಲು, ಸ್ವತ್ತುಗಳ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು, ಸ್ವತ್ತುಗಳ ಖರೀದಿ ಸಂದರ್ಭಗಳಲ್ಲಿ ಉಂಟಾಗುವ ವ್ಯಾಜ್ಯ ಹಾಗೂ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶದಿಂದ ಈ ತಂತ್ರಾಂಶಗಳನ್ನು ಸಂಯೋಜನೆ ಮಾಡಲಾಗಿದ್ದು, ಸಾರ್ವಜನಿಕರು ಇನ್ನು ಮುಂದೆ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿರುವ ತಮ್ಮ ಸ್ಥಿರಾಸ್ತಿಗಳ ವರ್ಗಾವಣೆ ಮತ್ತು ನೋಂದಣಿಯನ್ನು ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q