nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’
    • ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಿಸಿದ IMD
    ರಾಷ್ಟ್ರೀಯ ಸುದ್ದಿ August 14, 2022

    ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಿಸಿದ IMD

    By adminAugust 14, 2022No Comments2 Mins Read
    red alert

    ಮಾನ್ಸೂನ್‌ನ 2ನೇ ಹಂತದಲ್ಲಿ ಹಲವು ರಾಜ್ಯಗಳಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಒಡಿಶಾದಲ್ಲಿ ಉಂಟಾಗಿರುವ ಆಳವಾದ ಕಡಿಮೆ ಒತ್ತಡದ ಪರಿಣಾಮ ಬಂಗಾಳಕೊಲ್ಲಿಯಿಂದ ಆರ್ದ್ರ ಗಾಳಿ ಉತ್ತರ ಭಾರತವನ್ನು ತಲುಪುತ್ತಿದೆ. ಈ ಗಾಳಿಯಿಂದಾಗಿ ಆಗಸ್ಟ್ 14ರಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ ಇತ್ಯಾದಿಗಳಲ್ಲಿ ಮಳೆಯಾಗಲಿವೆ ಎಂದು ಹೇಳಲಾಗಿದೆ.

    ಈ ರಾಜ್ಯದಲ್ಲಿ ರೆಡ್ ಅಲರ್ಟ್

    ಇಂದು ಒಡಿಶಾದಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಎಸ್‌ಡಿಆರ್‌ಎಫ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇಂದು ಇಲ್ಲಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಪ್ರವಾಹದಂತಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಗ್ರೀನ್ ಅಲರ್ಟ್ ಇದೆ. ಮೋಡ ಕವಿದ ವಾತಾವರಣವಿರುವುದರಿಂದ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
    ಈ ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

    ಹಿಮಾಚಲ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ (MP), ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರ ಭಾಗಗಳಲ್ಲಿ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಿದೆ. ಈ ರಾಜ್ಯಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಅದೇ ರೀತಿ ಇಂದು ಬೇರೆಲ್ಲ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಇದ್ದು, ಭಯ ಪಡುವ ಅಗತ್ಯವಿಲ್ಲವೆಂದು IMD ತಿಳಿಸಿದೆ.

    IMD ಪ್ರಕಾರ ದೆಹಲಿಯ ಇಂದಿನ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಇಂದಿನ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇದೆ. ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಲಘು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ದೆಹಲಿಯಲ್ಲಿ ಲಘು ಅಥವಾ ತುಂತುರು ಮಳೆಯಾಗಲಿದೆ.

    ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ತಾಪಮಾನ ಕಡಿಮೆಯಾಗಿದೆ. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮತ್ತು ಭಾಷಣದ ಸಮಯದಲ್ಲಿ ಯಾವುದೇ ಪ್ರಮುಖ ಹವಾಮಾನ ಸಂಬಂಧಿತ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಮತ್ತೊಂದೆಡೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಆಗಸ್ಟ್ 14 ಮತ್ತು 15ರಂದು ಲಘು ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಪ್ರಕಾರ ಆಗಸ್ಟ್ 17 ಮತ್ತು 18ರಂದು ಮತ್ತೆ ದೆಹಲಿ ಸೇರಿದಂತೆ ಹರಿಯಾಣ, ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
    ಛತ್ತೀಸ್‌ಗಢದಲ್ಲಿ ಭಾರೀ ಮಳೆಯ ಎಚ್ಚರಿಕೆ

    ಛತ್ತೀಸ್‌ಗಢದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಶನಿವಾರ ಈ ಮಾಹಿತಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ರಾಯಗಢ, ಜಾಂಜ್‌ಗೀರ್-ಚಂಪಾ, ಬಲೋದಬಜಾರ್ ಮತ್ತು ಮಹಾಸಮುಂದ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿಲಾಸ್‌ಪುರ್, ಕೊರ್ಬಾ, ಮುಂಗೇಲಿ, ಗರಿಯಾಬಂದ್, ರಾಯ್‌ಪುರ, ದುರ್ಗ್ ಮತ್ತು ಧಮ್ತಾರಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ.
    ಒಡಿಶಾದಲ್ಲಿ ಪ್ರವಾಹ ಭೀತಿ

    ಒಡಿಶಾದ ಮೇಲಿನ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿರಾಕುಡ್ ಜಲಾಶಯದಲ್ಲಿ ಹೆಚ್ಚಿನ ನೀರಿನ ಹರಿವು ಹಿನ್ನೆಲೆ ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಅಪಾಯ ಹೆಚ್ಚಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತರ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಕಡಿಮೆ ಒತ್ತಡದ ಪ್ರದೇಶ ರಚನೆಯಾಗಿರುವುದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಇದರ ಪರಿಣಾಮ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    ವರದಿ ಆಂಟೋನಿ ಬೇಗೂರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಟ್ಲದಲ್ಲಿ ಮೊಳಗಿದ ಸಂಗೀತದ ಸುಮಧುರ ಸ್ವರ: ವೈಭವದಿಂದ ಜರುಗಿದ ‘ಸ್ವರ ಸಿಂಚನ ಸಂಗೀತೋತ್ಸವ–2026’

    September 8, 2026

    ವಿಟ್ಲ: ಮಕ್ಕಳಲ್ಲಿ ಪ್ರತಿಭೆ, ಶಿಸ್ತು, ಸಂಸ್ಕಾರ ಮತ್ತು ಸಾಂಸ್ಕೃತಿಕ ಅಭಿರುಚಿಯನ್ನು ಬೆಳೆಸುವ ಸದುದ್ದೇಶದಿಂದ ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ…

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಹೊಸ ದಿಗಂತ’ ಅಭಿವಿನ್ಯಾಸ ಕಾರ್ಯಕ್ರಮ ಯಶಸ್ವಿ

    September 8, 2026

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.