ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ.
ಪಾರ್ಟಿ ಪ್ರಿಯರ ನೆಚ್ಚಿನ ಸ್ಥಳಗಳಿಗೆ ಮಾದಕ ಪದಾರ್ಥಗಳು ಹೆಚ್ಚಾಗಿ ಸರಬರಾಜು ಆಗುವುದರಿಂದ ಆ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ, ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿರುವ ಮಾದಕ ದಂಧೆಕೋರರ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.


