ವಿಜಯಪುರ: ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.
ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು, ಮಧ್ಯಾಹ್ನ 3 ಗಂಟೆ, ರಾತ್ರಿ 10:11, ಮತ್ತೆ ರಾತ್ರಿ 10:25, ಮತ್ತೊಮ್ಮೆ ರಾತ್ರಿ 10:47 ಒಟ್ಟು 4 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಅಂತ ಇಲ್ಲಿನ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಜೋರಾದ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಸಿಂದಗಿ ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಈ ರೀತಿ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC