ಲೇಹ್ ಲಡಾಖ್ ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆಯ ಭೂಕಂಪನ ವರದಿಯಾಗಿದೆ.
ಇಂದು ಮುಂಜಾನೆ 4:33ರ ಸುಮಾರಿಗೆ ಈ ಘಟನೆ ನಡೆದಿದೆ. ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ಕೇಂದ್ರಬಿಂದು ನೆಲಮಟ್ಟದಿಂದ ಐದು ಕಿಲೋಮೀಟರ್ ಕೆಳಗೆ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ನಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ. ನಸುಕಿನ 1:13ರ ಸುಮಾರಿಗೆ ಕಂಪನ ಸಂಭವಿಸಿದೆ.


