ಬೆಂಗಳೂರಿನ ಚಂದ್ರ ಲೇಔಟ್ನಲ್ಲಿ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನು ಪತಿಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಮೊದಲ ಪತ್ನಿ ಹಾಗೂ ಆಕೆಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಸಂಬಂಧ ವಿಡಿಯೋ ಹಾಗೂ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.
ಸದ್ಯ ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು.
ತೇಜಸ್ ನ ಎರಡನೇ ಪತ್ನಿಯ ಸೀಮಂತ ಕಾರ್ಯಕ್ರಮದಲ್ಲಿ ಕೇಸ್ ಸಂಬಂಧ ಸುದ್ದಿಗೋಷ್ಠಿ ನಡೆಸಿದ ತೇಜಸ್ ಮೊದಲ ಪತ್ನಿ ಚೈತ್ರಾ ಎಂಬುವರು, ತೇಜಸ್ ಹಾಗೂ ನನ್ನ ನಡುವೆ 2018ರಲ್ಲಿ ಮದುವೆಯಾಗಿತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಇಂದು ಸೀಮಂತ ನಡೆಯುತ್ತಿದ್ದ ವೇಳೆಯಲ್ಲಿ ಪೋಟೋ ತೆಗೆದುಕೊಳ್ಳೋದಕ್ಕೆ ಹೋದಾಗ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ತೇಜಸ್ ನಿಂದ 4-5 ಹೆಣ್ಣುಮಕ್ಕಳ ಜೀವನ ಹಾಳಾಗಿದೆ ಎಂಬುದಾಗಿ ಹೇಳಿದರು.
ತೇಜಸ್ ಕುಟುಂಬದವರು ನಮ್ಮ ಇಡೀ ಕುಟುಂಬ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ನನಗೆ ಅನ್ಯಾಯ ಮಾಡಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


