ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಈಚನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪುಷ್ಪ ಜಗದೀಶ್ ಹಿಂದಿನ ಒಡಂಬಡಿಕೆಯ ಪ್ರಕಾರ, ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ.
ಗ್ರಾಪಂ ಅಧ್ಯಕ್ಷೆ ಶ್ರುತಿ ಜಯದೇವ್, ನಿಕಟಪೂರ್ವ ಉಪಾಧ್ಯಕ್ಷ ಕೆ.ಬಿ.ನವೀನ್ ಕುಮಾರ್, ಸದಸ್ಯರಾದ ಭಾಗ್ಯ,ಗೀತಾ, ಉಮೇಶ್ ನಾಗರಾಜ್, ಸುಧಾ ಮತ್ತು ಗೀತಾ ಸೇರಿದಂತೆ ಮುಖಂಡರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪಿಡಿಒ ಶಿವಕುಮಾರ್, ಕಾರ್ಯದರ್ಶಿ ಭರತ್ ಕುಮಾರ್ ಮತ್ತು ಸಿಬ್ಬಂದಿ ವರ್ಗ ಹಾಗೂ ಮುಖಂಡ ಈಚನೂರು ರಾಜಶೇಖರ್ ಅಭಿನಂದನೆ ಸಲ್ಲಿಸಿದರು. ನೂತನ ಉಪಾಧ್ಯಕ್ಷೆ ಪುಷ್ಪ ಜಗದೀಶ್ ಮಾತನಾಡಿ, ಎಲ್ಲ ಸದಸ್ಯರುಗಳ ಬೆಂಬಲದೊಂದಿಗೆ ಗ್ರಾಮದ ಮತ್ತು ಪಂಚಾಯಿತಿಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy