ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ED) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್ ಜಾರಿ ಮಾಡಿದೆ.
ಇಡಿ ನೋಟಿಸ್ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್ನ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx