ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮಾಲಿಕತ್ವದ ಕಾಲೇಜಿನ ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದರು. ಆ ಮಾಹಿತಿಯನ್ನು ನಾವು ನೀಡಿದ್ದೇವೆ. ಇಡಿ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡಿ ಎಂದು ನಮ್ಮ ಸಿಬ್ಬಂದಿಗೆ ತಿಳಿಸಿದ್ದೇನೆ. ನಿನ್ನೆ ಇಡಿ ದೆಹಲಿಯ ಅಧಿಕಾರಿಗಳು ನಮ್ಮ ಮೂರು ಕಾಲೇಜುಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರಿಗೆ ಏನು ಸೂಚನೆ ಬಂದಿದೆಯೋ ಗೊತ್ತಿಲ್ಲ. ಅವರು ಕೇಳಿದ ದಾಖಲೆಗಳನ್ನು ನಾವು ಕೊಡುತ್ತೇವೆ ಎಂದರು.
ಇಡಿ ದಾಳಿಯ ಉದ್ದೇಶ ಗೊತ್ತಿಲ್ಲ. ಅವರಿಗೆ ಸಹಕಾರ ನೀಡುತ್ತೇನೆ. ನಾನು ಯಾವುದನ್ನು ಮುಚ್ಚಿಟ್ಟಿಲ್ಲ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ನಾನು ಕಾನೂನಿಗೆ ಗೌರವ ಕೊಡುತ್ತೇನೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW