ತುಮಕೂರು: ತುಮಕೂರು ನಗರದಲ್ಲಿರುವ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಎರಡನೇ ದಿನವೂ ಮುಂದುವರೆದಿದೆ.
ಬಹುತೇಕ ಮಧ್ಯ ರಾತ್ರಿವರೆಗೂ ಈಡಿ ಅಧಿಕಾರಿಗಳು ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇಂದು ಬೆಳಗ್ಗೆಯಿಂದಲೂ ಈಡೇ ಅಧಿಕಾರಿಗಳು ಕಾಲೇಜಿನ ಆವರಣದಲ್ಲಿ ಮೊಕ್ಕಾಮ್ ಹೂಡಿದ್ದು, ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಕೂಡ ನಿಯೋಜನೆ ಮಾಡಲಾಗಿದೆ.
ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಯಾರನ್ನು ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————