ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ ಎಸ್ ಐಟಿ ಕಾಲೇಜಿನ ಮೇಲೆ ಇಡಿ ದಾಳಿ ನಡೆದಿದೆ.
ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ರೇಡ್ ಮಾಡಲಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸದ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇಂದು ಬೆಳಗ್ಗೆ ಸುಮಾರು 9:30 ಸಂದರ್ಭದಲ್ಲಿ 5 ತಂಡಗಳಲ್ಲಿ ದಾಳಿ ನಡೆಸಿದ ಇಡೀ ಅಧಿಕಾರಿಗಳು ನಿರಂತರವಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜ್ ಆವರಣದೊಳಗೆ ಗುರುತಿನ ಪತ್ರ ಹೊಂದಿದ ವಿದ್ಯಾರ್ಥಿಗಳಿಗೆ ಮಾತ್ರ ಒಳಗೆ ಬಿಡಲಾಗುತ್ತಿದ್ದು ಯಾರನ್ನು ಕೂಡ ಕಾಲೇಜಿನ ಕ್ಯಾಂಪಸ್ ಗೆ ಬಿಡಲಾಗುತ್ತಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW