ತಿಪಟೂರು: ಇಡಿ ತನಿಖೆಯ ಹೆಸರಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ ಷಡಕ್ಷರಿ ಆರೋಪಿಸಿದರು
ತಿಪಟೂರು ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾತನಾಡಿದ ಕೆ ಷಡಕ್ಷರಿ, ಅಗ್ನಿಪಥ ಯೋಜನೆಯ ಮೂಲಕ ದೇಶದ ಶಕ್ತಿಯನ್ನು ಕುಂದಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಲೋಕೇಶ್ ಮಾತನಾಡಿ, ಜನರ ತೆರಿಗೆ ಹಣದಿಂದ ಬಿಜೆಪಿ ಕಟ್ಟಾಳು ಗಳಿಗೆ ಸರ್ಕಾರದ ವತಿಯಿಂದ ಮೂರು ವರ್ಷ ತರಬೇತಿ ನೀಡಿ, ನಂತರ ಅವರನ್ನು ಪಕ್ಷದ ಕೆಲಸಕ್ಕೆ ನಿಯೋಜಿಸಿಕೊಳ್ಳುವ ಹುನ್ನಾರವೇ ಅಗ್ನಿಪಥ್ ನೇಮಕಾತಿ ಎಂದು ಆರೋಪಿಸಿದರು.
ಇದೇ ವೇಳೆ ತಹಶೀಲ್ದಾರ್ ಚಂದ್ರಶೇಖರ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ನಗರಸಭಾ ಅಧ್ಯಕ್ಷ ಟಿ.ಎಂ.ಪ್ರಕಾಶ್ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸುರೇಶ್, ನಗರಸಭಾ ಸದಸ್ಯ ಮೇಘನಾ, ಭೂಷಣ್, ಲೋಕ್ ನಾಥ್ ಸಿಂಗ್, ಆರ್.ದಿನೇಶ್ ಬಾಬು , ನಿಖಿಲ್ ರಾಜಣ್ಣ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz