nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇದ್ದೂ ಇಲ್ಲದಂತಾದ ಜನೌಷಧಿ ಮಳಿಗೆ | 3 ತಿಂಗಳಿಂದ ಬೀಗ; ದುಬಾರಿ ಔಷಧಿಯೇ ‘ಗತಿ ಈಗ’
    ಕೊರಟಗೆರೆ September 18, 2022

    ಇದ್ದೂ ಇಲ್ಲದಂತಾದ ಜನೌಷಧಿ ಮಳಿಗೆ | 3 ತಿಂಗಳಿಂದ ಬೀಗ; ದುಬಾರಿ ಔಷಧಿಯೇ ‘ಗತಿ ಈಗ’

    By adminSeptember 18, 2022No Comments2 Mins Read
    koratagere

    ಕೊರಟಗೆರೆ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಮಳಿಗೆಯು ಕೇವಲ ನೆಪಮಾತ್ರಕ್ಕೆ ಇದ್ದಂತಾಗಿದ್ದು, ಬಡ ಜನರಿಗೆ ಸಿಗಬೇಕಾದ ಔಷಧಿಗಳು ಸಿಗದೇ ಮೂರು ತಿಂಗಳಿಂದ ಬಂದ್ ಆಗಿದ್ದು, ಸಾರ್ವಜನಿಕರಿಗೆ ಸಂಕಷ್ಟವಾಗಿ ಪರಿಣಮಿಸಿದೆ.

    ಜನೌಷಧಿ ಮಳಿಗೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಹು ದೊಡ್ಡ ಯೋಜನೆಯಾಗಿದ್ದು, ಜನರಿಗೆ ಸಹಾಯಕವಾಗಿತ್ತು. ಇದೀಗ ಜನೌಷಧಿ ಕೇಂದ್ರ 3 ತಿಂಗಳುಗಳಿಂದ ಮುಚ್ಚಿರುವುದರಿಂದ ಬಡ ಜನರು ದುಬಾರಿ ಹಣ ನೀಡಿ ಖಾಸಗಿ ಔಷಧಿ ಮಳಿಗೆಗಳಿಂದ ಔಷಧಿ ಖರೀದಿಸುವಂತಾಗಿದೆ.


    Provided by
    Provided by

    ಈ ಕುರಿತಾಗಿ ಸಂಬಂಧ ಪಟ್ಟ ಎಂಎಸ್ ಐಎಲ್ ಅಧಿಕಾರಿಗಳನ್ನು ಕೇಳಿದರೆ, ಬಿ ಫಾರ್ಮ್, ಡಿ ಫಾರ್ಮ್ ಮಾಡಿರುವ ವಿದ್ಯಾರ್ಥಿಗಳು ನಮಗೆ ಸಿಗುತ್ತಿಲ್ಲ ಎಂದು ಉಡಾಫೆ ಉತ್ತರ ಹೇಳುತ್ತಿದ್ದಾರೆ.  ತಮಗೂ ಅದಕ್ಕೂ ಸಂಬಂಧವೇ ಎನ್ನುವಂತಹ ಮನಸ್ಥಿತಿಯನ್ನು ಅಧಿಕಾರಿಗಳು ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

    ಎಂಎಸ್ ಐಎಲ್ ಗುತ್ತಿಗೆದಾರ ಡಿ ಎಲ್ ಓ ಮಂಜುನಾಥ್ ಈ ಬಗ್ಗೆ ಪ್ರತಿಕ್ರಿಯಿಸಿ,  ಸುಮಾರು ಮೂರು ತಿಂಗಳಿಂದ ಮಳಿಗೆಯನ್ನು ಮುಚ್ಚಿದ್ದೇವೆ. ಫಾರ್ಮಸಿ ಮಾಡಿರುವ ವ್ಯಕ್ತಿಗಳು ಸಿಗದೇ ಇರುವುದು ಇದಕ್ಕೆ ಕಾರಣ. ತುಮಕೂರು ಸಿದ್ದಗಂಗಾ ಕಾಲೇಜು ಸೇರಿದಂತೆ ಅನೇಕ ಕಡೆ ಜಾಹೀರಾತು ಪ್ರಕಟಿಸಿದ್ದೇವೆ. ಆದಷ್ಟು ಬೇಗ ಬಿ ಫಾರ್ಮಸಿ ಅಥವಾ ಡಿ ಫಾರ್ಮಸಿ ಆಗಿದ್ದರೆ ಕೂಡಲೇ ನೇಮಿಸಿಕೊಂಡು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದರು.

    ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಪುಷ್ಪಲತಾ  ಅವರು ಪ್ರತಿಕ್ರಿಯಿಸಿ,  ಈಗಾಗಲೇ ನಾನು ಅಧಿಕಾರ ವಹಿಸಿಕೊಂಡು ಒಂದು ವರ್ಷ ಆಗಿದೆ. ಆವಾಗಿಂದಲೂ ಇಂದಿನವರೆಗೆ ಜನೌಷಧಿ ಮಳಿಗೆಯ ಬಗ್ಗೆ ಅನೇಕ ಸಮಸ್ಯೆಗಳು ಕೇಳಿ ಬರುತ್ತಿವೆ. ಎರಡು ತಿಂಗಳಿಂದ ಸಂಪೂರ್ಣವಾಗಿ ಮಳಿಗೆಯನ್ನು ಬಂದ್ ಮಾಡಿದ್ದಾರೆ. ಈ ವಿಚಾರವಾಗಿ ಎಂಎಸ್ ಐಎಲ್ ಸೂಪರ್ ವೈಸರ್ ಮಂಜುನಾಥ್ ರವರ ಜೊತೆ ಮಾತನಾಡಿ ಪ್ರಾರಂಭ ಮಾಡಲು ಹೇಳಿದ್ದೇನೆ. ಎಂಎಸ್ ಐಎಲ್ ನವರಿಗೆ ಸೆಪ್ಟಂಬರ್ ಮೊದಲ ವಾರದಲ್ಲೇ ಪ್ರಾರಂಭಿಸುವಂತೆ ಹೇಳಿದ್ದೆ. ಅವರು ಮೇಲಾಧಿಕಾರಿಗಳ ಜೊತೆ ಮಾತಾಡಿ ಒಂದು ವಾರದಲ್ಲೇ ಪ್ರಾರಂಭ ಮಾಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

    ಯುವ ಬಿಜೆಪಿ ಮುಖಂಡ ಗುರುದತ್ ಈ ಬಗ್ಗೆ ಪ್ರತಿಕ್ರಿಯಿಸಿ,  ಕಳೆದ ಮೂರು ತಿಂಗಳಿಂದ ಸ್ಥಗಿತಗೊಂಡಿರುವ ಜನೌಷಧಿ ಮಳಿಗೆಗೆ ಹೆಚ್ಚಿನ ಬೇಡಿಕೆ ಇದೆ. ಪ್ರತಿದಿನ ನೂರಾರು ಬಡ ರೋಗಿಗಳು ಆಸ್ಪತ್ರೆಗೆ ಬರುತ್ತಾರೆ. 30 ರಿಂದ 40 ರೂಪಾಯಿ ಒಳಗೆ ತಿಂಗಳಿಗಾಗುವಷ್ಟು ಬಿಪಿ ಮಾತ್ರೆಗಳು ಸೇರಿದಂತೆ ಅನೇಕ ಔಷಧಗಳು ಇಲ್ಲಿ ದೊರೆಯುತ್ತವೆ. ಇದೇ ಮಾತ್ರೆಗಳನ್ನು ಬೇರೆ ಕಡೆ ಖರೀದಿ ಮಾಡಿದಾಗ 140 ರಿಂದ 150 ರೂಪಾಯಿ ಕೊಡಬೇಕು. ದಯವಿಟ್ಟು ಎಂಎಸ್ಐಎಲ್ ನವರು ಶೀಘ್ರವಾಗಿ ಜನೌಷಧಿ ಮಳಿಗೆ ಪ್ರಾರಂಭಿಸಿ ಬಡವರ ಬಗ್ಗೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಸಾರ್ವಜನಿಕರ ಪರವಾಗಿ ಕೇಳಿಕೊಳ್ಳುತ್ತೇನೆ ಎಂದರು.

    ಪಟ್ಟಣ ಪಂಚಾಯ್ತಿ ಸದಸ್ಯ ಕರವೇ ನಟರಾಜು ಮಾತನಾಡಿ,  ಜನೌಷಧಿ ಮಳಿಗೆಯಿಂದ ಸುಮಾರು ಜನರು ಅನುಕೂಲ ಪಡೆದುಕೊಳ್ಳುತ್ತಿದ್ದರು. ಇವತ್ತಿನ ದಿನ ಔಷಧಿಗಳ ಬೆಲೆ ಮುಗಿಲು ಮುಟ್ಟಿದೆ. ಸರ್ಕಾರವು ಆದಷ್ಟು ಬೇಗ ಒಬ್ಬ ವ್ಯಕ್ತಿಯನ್ನು ಜನೌಷಧಿ ಮಳಿಗೆಗೆ ನಿಯೋಜಿಸಿ ಜನರ ಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

    ಒಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಮಳಿಗೆ  ಇದ್ದೂ ಇಲ್ಲದಂತಾಗಿದೆ. ಬಡವರಿಗೆ ಸಹಾಯವಾಗಿದ್ದ, ಔಷಧಿ ಮಳಿಗೆಯನ್ನೇ ಬಂದ್ ಮಾಡಿದರೆ, ಸರ್ಕಾರಿ ಆಸ್ಪತ್ರೆ ಇದ್ದು ಏನು ಪ್ರಯೋಜನ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಗಮನ ಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಮನವಿ ಮಾಡಿಕೊಂಡಿದ್ದಾರೆ. ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸದಿದ್ದರೆ, ಜನರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    ವರದಿ:  ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.