ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಏಪ್ರಿಲ್ 5ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ.
ಮಹಾರಥೋತ್ಸವದ ಅಂಗವಾಗಿ ಮಾರ್ಚ್ 29 ರಿಂದ ಏಪ್ರಿಲ್ 12ರವರೆಗೆ ಜಾತ್ರಾ ಕಾರ್ಯಕ್ರಮಗಳು ನಡೆಯಲಿದ್ದು, ಏಪ್ರಿಲ್ 6ರಂದು ರಾತ್ರಿ 10 ಗಂಟೆಗೆ ಬಿಲ್ವವೃಕ್ಷ ವಾಹನೋತ್ಸವ, ಏಪ್ರಿಲ್ 7ರಂದು ರಾತ್ರಿ 10 ಗಂಟೆಗೆ ಬೆಳ್ಳಿಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ಜರುಗಲಿವೆ.
ಪ್ರತಿ ವರ್ಷದಂತೆ ದನಗಳ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬರುವ ರಾಸುಗಳಿಗೆ ನೀರು ಮತ್ತು ನೆರಳಿನ ಸೌಲಭ್ಯ ಕಲ್ಪಿಸಲಾಗುವುದು. ಜಾತ್ರೆಯಲ್ಲಿ ಆಯ್ಕೆ ಮಾಡುವ ಉತ್ತಮ ರಾಸುಗಳಿಗೆ ಏಪ್ರಿಲ್ 5ರ ಸಂಜೆ 5 ಗಂಟೆಗೆ ಬಹುಮಾನ ವಿತರಿಸಲಾಗುವುದು.
ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತಾದಿಗಳು ಜಾತ್ರೆಗೆ ಆಗಮಿಸಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ವಿಶೇಷ ಸಾರಿಗೆ ಸೌಕರ್ಯ ಲಭ್ಯವಿರುತ್ತದೆ. ಜಾತ್ರಾ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4