ಬೆಂಗಳೂರು: ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಆರೋಪಿಸಿದರು.
ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ:
ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx