nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

    October 4, 2026
    Facebook Twitter Instagram
    ಟ್ರೆಂಡಿಂಗ್
    • ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    • ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!
    • ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?
    • ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    ಮಧುಗಿರಿ October 4, 2026

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    By Ganesh TumkuruOctober 4, 2026No Comments2 Mins Read
    siddaganga

    ಮಿಡಿಗೇಶಿ: ಗ್ರಾಮಾಂತರ ಮಕ್ಕಳಿಗೆ, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಕುಟುಂಬಗಳನ್ನು ಉದ್ಧರಿಸುವ ಮಹತ್ವದ ಗುರಿಯನ್ನು ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳು ಹೊಂದಿದ್ದರು ಎಂದು ಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ತಿಳಿಸಿದರು. ಮಧುಗಿರಿ ತಾಲ್ಲೂಕು, ಮಿಡಿಗೇಶಿ ಹೋಬಳಿ, ನೇರಳಕೆರೆ ಶ್ರೀ ರಂಗನಾಥ ಗ್ರಾಮಾಂತರ ಪ್ರೌಢಶಾಲೆ (ಸಿದ್ಧಗಂಗಾ ಮಠದ ಶಾಖೆ) ಯಲ್ಲಿ 1999–2000ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳು ಆಯೋಜಿಸಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

    ಮಾತನಾಡುತ್ತಾ ಮುಂದುವರೆದ ಸ್ವಾಮೀಜಿಗಳು, ಹೆಣ್ಣುಮಕ್ಕಳು ಶಿಕ್ಷಣ ಪಡೆದರೆ ತಮ್ಮ ಮುಂದಿನ ಪೀಳಿಗೆಗೆ ಮತ್ತು ಕುಟುಂಬಕ್ಕೆ ಉತ್ತಮ ಶಿಕ್ಷಣ ಕೊಡಿಸಲು ಹೆಚ್ಚು ಆಸಕ್ತಿ ವಹಿಸುತ್ತಾರೆ ಎಂಬುದು ಶಿವಕುಮಾರ ಶ್ರೀಗಳ ಅಚಲ ವಿಶ್ವಾಸವಾಗಿತ್ತು ಎಂದರು. “ನಮ್ಮ ಶಾಲೆ, ನಮ್ಮ ಶಿಕ್ಷಕರು” ಎಂಬ ಭಾವನೆಯಿಂದ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದ್ದು, ಇದು ಶಿಕ್ಷಕರಿಗೆ ಹೊಸ ಶಕ್ತಿ ತುಂಬುವುದರ ಜತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ ಎಂದು ಹೇಳಿದರು. ಸಿದ್ಧಗಂಗಾ ಮಠದ ಶಾಖಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಇಂಜಿನಿಯರ್‌ಗಳು ಹಾಗೂ ವೈದ್ಯರಾಗಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಮಠಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಅಲ್ಲದೆ, ಗುರುಗಳಿಗೆ ನೀಡುವಷ್ಟೇ ಗೌರವವನ್ನು ಜನ್ಮ ನೀಡಿ ಭವಿಷ್ಯ ರೂಪಿಸಿದ ತಂದೆ–ತಾಯಿಯರಿಗೂ ನೀಡಿ, ಪ್ರೀತಿಯಿಂದ ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಳೆಯ ವಿದ್ಯಾರ್ಥಿನಿ ಹಾಗೂ ಐಎಎಸ್ ಅಧಿಕಾರಿ ಶ್ರೀಮತಿ ಸತ್ಯಭಾಮ ಮಾತನಾಡಿ, ಕುಟುಂಬದಲ್ಲೇ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಸಮಾಜದಲ್ಲಿ ಆದರ್ಶ ಪ್ರಜೆಗಳಾಗಬಹುದು ಎಂದರು. ಇಂದಿನ ಆಧುನಿಕ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಮತ್ತು ಮನೆಯ ಗೃಹಿಣಿಯರ ಪಾತ್ರವನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು. ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಗ್ರಾಮಸ್ಥರು ಹಾಗೂ ನಿವೃತ್ತ ಮುಖ್ಯ ಶಿಕ್ಷಕರಾದ ರಾಮಸಂಜೀವಯ್ಯ ಅವರ ಪರಿಶ್ರಮ ಅಪಾರವಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳ ಪೈಪೋಟಿಯಲ್ಲೂ ಈ ಶಾಲೆ ಯಶಸ್ವಿಯಾಗಿ ಮುನ್ನಡೆಯುತ್ತಿರುವುದಕ್ಕೆ ಶಿಕ್ಷಕರ ಸಮರ್ಪಣಾ ಭಾವವೇ ಕಾರಣ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಸ್ಥ ಹನುಮಂತರಾಯಪ್ಪ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಹಾಗೂ ಕಾರ್ಯನಿರತ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರನ್ನು ಹಳೆಯ ವಿದ್ಯಾರ್ಥಿಗಳು ಅದ್ದೂರಿಯಾಗಿ ಸನ್ಮಾನಿಸಿ ಗೌರವಿಸಿದರು. ಈ ಸಮಾರಂಭದಲ್ಲಿ ನಿವೃತ್ತ ಡಿಜಿಎಂ (ಬಿಎಸ್ ಎನ್ ಎಲ್) ಎ. ಶಿವರಾಮ ಶೆಟ್ಟಿ, ನಿವೃತ್ತ ಡಿವೈಎಸ್ಪಿ ಎಂ. ಪಾಷ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಮೇಶ್ ಎಸ್. ಸ್ವಾಗತಿಸಿ, ಪಾರ್ವತಮ್ಮ ಗಂಗಾಧರ ನಿರೂಪಿಸಿದರು.

    ವರದಿ: ಎನ್.ಎಸ್.ಈಶ್ವರಪ್ರಸಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ

    October 2, 2026

    ಸಿಂಹಾದ್ರಿ ಕುಟುಂಬಕ್ಕೆ ಕೆ.ಎನ್.ಆರ್ ಸಾಂತ್ವನ: ತಾಯಿಗೆ ಉದ್ಯೋಗ, ಮನೆ ಕಟ್ಟಿಸಿಕೊಡುವ ಭರವಸೆ

    October 1, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಿಡಿಗೇಶಿ: ಗ್ರಾಮಾಂತರ ಮಕ್ಕಳಿಗೆ, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಕುಟುಂಬಗಳನ್ನು ಉದ್ಧರಿಸುವ ಮಹತ್ವದ ಗುರಿಯನ್ನು…

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?

    October 4, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.