ಬೆಂಗಳೂರು:ರಾಜ್ಯ ಸರ್ಕಾರ ಮುಚ್ಚಿಸಲು ಉದ್ದೇಶಿಸಿರುವ 9 ವಿವಿಗಳು ಲಾಭದಾಯವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶಿಕ್ಷಣವೆಂದರೆ ವ್ಯಾಪಾರವಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದಿದ್ದಾರೆ.
ಮಂಡ್ಯದಲ್ಲಿ ಪ್ರತಿಭಟನೆಯನ್ನುದ್ದೇಶಿದಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ, ಶಿಕ್ಷಣವೆಂದರೆ ವ್ಯಾಪಾರವಲ್ಲ ಎಂದಿದ್ದಾರೆ.
ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4