nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    By adminApril 15, 2026No Comments2 Mins Read
    siddaramaiah

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

    ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ಆಯೋಜಿಸಿದ್ದ “ಕನ್ನಡ ಸಾಮರಸ್ಯ ನೆಲೆಗಳು” ಸರಣಿಯ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ಕರ್ನಾಟಕದ ಬಹುಮುಖ ಪರಂಪರೆಯನ್ನು ಬಿಂಬಿಸುವ ಈ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರಲು ಉದ್ದೇಶಿಸಲಾಗಿದ್ದು, ಇಂದು ಮೊದಲ ಹಂತದಲ್ಲಿ 41 ಪುಸ್ತಕಗಳು ಬಿಡುಗಡೆಯಾದವು. ಉಳಿದ 59 ಪುಸ್ತಕಗಳು ಶೀಘ್ರದಲ್ಲೇ ಲೋಕಾರ್ಪಣೆಯಾಗಲಿವೆ ಎಂದು ಅವರು ತಿಳಿಸಿದರು.


    Provided by
    Provided by

    “ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್ ಅವರು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ. ಸಂವಿಧಾನ ಜಾರಿಯಾದ ನಂತರ ಸುಧಾರಣೆಯ ವೇಗ ಹೆಚ್ಚಿದೆಯಾದರೂ, ಸಾಮಾಜಿಕ ವ್ಯವಸ್ಥೆ ಇಂದಿಗೂ ಸಂಪೂರ್ಣವಾಗಿ ಬದಲಾಗಿಲ್ಲ. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ಲಭಿಸಬೇಕು,” ಎಂದು ಸಿಎಂ ಪ್ರತಿಪಾದಿಸಿದರು.

    ಬಿಡುಗಡೆಯಾಗಿರುವ ಈ ಪುಸ್ತಕಗಳು ಕೇವಲ ಮುದ್ರಣಕ್ಕೆ ಸೀಮಿತವಾಗದೆ ಯುವಜನರನ್ನು ತಲುಪಬೇಕು. ಯುವಕರಲ್ಲಿ ಮಾನವೀಯತೆ ಮತ್ತು ವೈಚಾರಿಕ ಪ್ರಜ್ಞೆ ಮೂಡಿದಾಗ ಮಾತ್ರ ಈ ಯೋಜನೆಯ ಉದ್ದೇಶ ಸಫಲವಾಗುತ್ತದೆ. ಪಂಪ, ಕನಕದಾಸ, ಬಸವಣ್ಣ ಮತ್ತು ಕುವೆಂಪು ಅವರ ವಿಚಾರಧಾರೆಗಳನ್ನು ಇಂದಿನ ಪೀಳಿಗೆ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದರು.

    “ಬಸವಣ್ಣನವರ ‘ಇವ ನಮ್ಮವ’ ಎನ್ನುವ ಭಾವನೆ ಎಲ್ಲರಲ್ಲೂ ಮೂಡಬೇಕು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆಶಯಗಳನ್ನು ಸರಿಯಾಗಿ ಅರ್ಥೈಸಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಕುವೆಂಪು ಅವರು ಹೇಳಿದಂತೆ ಗುಡಿ, ಚರ್ಚ್, ಮಸೀದಿಗಳನ್ನು ಬಿಟ್ಟು ಹೊರಬಂದು ಮನುಷ್ಯತ್ವವನ್ನು ಪೂಜಿಸಬೇಕು,” ಎಂದು ಅವರು ಕರೆ ನೀಡಿದರು.

    ಭಾರತವು ಅನೇಕ ಭಾಷೆ, ಧರ್ಮ ಮತ್ತು ಸಂಸ್ಕೃತಿಗಳ ಬೀಡಾಗಿದ್ದು, ಕರ್ನಾಟಕದಲ್ಲೂ ಅಂತಹದ್ದೇ ವೈವಿಧ್ಯತೆ ಇದೆ. ಈ ವೈವಿಧ್ಯತೆಯ ನಡುವೆಯೂ ನಾವು ಏಕತೆಯನ್ನು ಸಾಧಿಸಿದ್ದೇವೆ. ಈ ಸಾಮರಸ್ಯದ ನೆಲೆಯನ್ನು ಗಟ್ಟಿಗೊಳಿಸಲು ಇಂತಹ ಸಾಹಿತ್ಯಿಕ ಪ್ರಯತ್ನಗಳು ಪೂರಕವಾಗಿವೆ ಎಂದು ಸಿದ್ದರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳು, ಸಾಹಿತಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.