ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪನವರ ಸೋಲಿಗೆ ನಾವೇ ಕಾರಣಕರ್ತರಾದೆವು. ಈ ಬಾರಿ ತುರುವೇಕೆರೆಯಲ್ಲಿ ಎಂ.ಟಿ. ಕೃಷ್ಣಪ್ಪನ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರು ಶ್ರಮಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕರೆ ನೀಡಿದರು.
ಗುಬ್ಬಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಟಿ ಕೃಷ್ಣಪ್ಪನವರ ಪರ ಮತಯಾಚನೆ ಕಾರ್ಯಕ್ರಮಕ್ಕೆ ಆಗಮಿಸಿ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಹಾಗೆಯೇ ಹೆಚ್.ಡಿ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಯಾಗುವುದು ಶತಸಿದ್ಧ ಚುನಾವಣೆ ಮುಗಿಯುವವರೆಗೂ ಎಲ್ಲಾ ಕಾರ್ಯಕರ್ತರು ಸಹ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ತಿಳಿಸಿದರು.
ಮಾಜಿ ಶಾಸಕ ಜೆಡಿಎಸ್ ಅಭ್ಯರ್ಥಿ ಎಂ.ಟಿ.ಕೃಷ್ಣಪ್ಪ ಮಾತನಾಡಿ ಭಾರತದ ಇತಿಹಾಸದಲ್ಲಿ ಎರಡು ಭಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಪಕ್ಷ ಅದು ಜೆಡಿಎಸ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರೈತರ ಸಂಕಷ್ಟಗಳಿಗೆ ಧಾವಿಸುವ ಮೂಲಕ ರೈತಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಪಂಚರತ್ನ ಯೋಜನೆಗಳ ಮೂಲಕ ಜನತೆಯ ಶ್ರೇಯೋಭಿವೃದ್ಧಿಗೆ ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಯನ್ನಾಗಿ ಮಾಡುವ ಪಣವನ್ನು ಪ್ರತಿ ಜೆಡಿಎಸ್ ಕಾರ್ಯಕರ್ತರು ತೊಡಬೇಕು ಎಂದು ತಿಳಿಸಿದರು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


