ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿದ್ದ ಅಕ್ಕ-ತಮ್ಮ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿಯಲ್ಲಿ ನಡೆದಿದ್ದು, ಇನ್ನೂ ಬಾಳಿ ಬದುಕಬೇಕಾದ ಅಪ್ರಾಪ್ತ ವಯಸ್ಸಿನ ಸಹೋದರ, ಸಹೋದರಿ ದಾರುಣವಾಗಿ ಸಾವನ್ನಪ್ಪಿದ್ದಾರೆ
15 ವರ್ಷ ವಯಸ್ಸಿನ ಚಂದು ಹಾಗೂ 11 ವರ್ಷ ವಯಸ್ಸಿನ ಹರ್ಷ ನೀರುಪಾಲಾದವರು ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಈಜಲು ನೀರಿಗಿಳಿದಾಗ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹಗಳಿಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


