ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.
ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಯತ್ನ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಕಾಂತೇಶ್ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA