ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದರು.
ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು.
ಬಿಬಿಎಂಪಿ ಆಸ್ತಿಗಳನ್ನು ಸರಕಾರ ಅಡವಿಡುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಯಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ ಅಂದಾಜು ವಿಭಾಗವನ್ನು ಭದ್ರಗೊಳಿಸಿ ದಾಖಲೆಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಅಡಮಾನವೂ ಇಲ್ಲ, ಏನೂ ಇಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


