ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಅಜೀಂ ಪ್ರೇಮ್ ಜೀ ಪ್ರತಿಷ್ಠಾನ -ರಾಜ್ಯ ಸರ್ಕಾರದ ನಡುವೆ 3 ವರ್ಷಗಳ ಅವಧಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಒಪ್ಪಂದ ದಾಖಲೆಗಳ ವಿನಿಮಯದ ಬಳಿಕ ಮುಖ್ಯಮಂತ್ರಿಯವರು ಮಾತನಾಡಿದರು.
ರಾಜ್ಯದ 53,080 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 55 ಲಕ್ಷ ಮಕ್ಕಳಿಗೆ ವಾರಕ್ಕೆ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರ ನೀಡಲು ಮುಂದೆ ಬಂದಿರುವ ಅಜೀಂ ಪ್ರೇಮ್ ಜೀ ಪ್ರತಿಷ್ಠಾನದ ಅಧ್ಯಕ್ಷ ಅಜೀಂ ಪ್ರೇಮ್ ಜೀ ಅವರದ್ದು ದೊಡ್ಡ ಮನಸ್ಸು. ಪ್ರೇಮ್ ಜೀ ಮತ್ತು ಕುಟುಂಬಕ್ಕೆ ಸರ್ಕಾರದ ಪರವಾಗಿ ಧನ್ಯವಾದ. ಇಂತಹ ಅನೇಕ ಜನಪರ ಕೆಲಸಗಳು, ದಾನ ಧರ್ಮ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪೂರಕ ಪೌಷ್ಠಿಕ ಆಹಾರ ನೀಡಲು 3 ವರ್ಷಗಳಿಗೆ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸುಮಾರು 1500 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತದೆ ಎನ್ನಲಾಗಿದೆ. ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ 2 ದಿನ ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ನೀಡಲಾಗುತ್ತಿತ್ತು. ಇನ್ನು ಮುಂದೆ ಪ್ರೇಮ್ ಜೀ ಫೌಂಡೇಷನ್ ನೆರವಿನಿಂದ ವಾರದ ನಾಲ್ಕು ದಿನ ಸೇರಿಸಿದರೆ ವಾರದ ಎಲ್ಲಾ ದಿನವೂ ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ಲಭಿಸಲಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA