ಬೆಂಗಳೂರು: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಪೊಲೀಸರಿಂದ ಬಿಗಿಭದ್ರತೆ ಒದಗಿಸಲಾಗಿದೆ. ಪೆನ್ ಡ್ರೈವ್ ವಿಚಾರ ಮಾತನಾಡುವಾಗ ಮಾಜಿ ಸಂಸದರು ಜೆಡಿಎಸ್ ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ತಡರಾತ್ರಿ ಕಾರಿನಲ್ಲಿ ಬಂದ ಐದಾರು ಮಂದಿಯಿಂದ ಈ ಯತ್ನ ನಡೆದಿದೆ.
ಪೊಲೀಸರು ಕಂಡು ಮನೆ ಮುಂದೆ ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಈ ನಡುವೆ ಪೊಲೀಸರ ಕಣ್ತಪ್ಪಿಸಿ ಅದಾಗಲೇ ಐದಾರು ಮೊಟ್ಟೆ ಎಸೆದಿದ್ದಾರೆ. ಸದ್ಯ ಮೊಟ್ಟೆ ಎಸೆಯಲು ಯತ್ನಿಸಿ ಪರಾರಿಯಾದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮೊಟ್ಟೆ ಎಸೆಯಲು ಯತ್ನಿಸಿದವರಿಗೆ ಬಲೆ ಬೀಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


