ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್ ಹಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂ.17ರಂದು ಬಕ್ರೀದ್(ಈದುಲ್ ಅಝ್‍ಹಾ) ಆಚರಿಸಲು ಅಮೀರೆ ಶರೀಅತ್ ಕರ್ನಾಟಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮೋಡ ಕವಿದ ವಾತಾವರಣದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಚಂದ್ರ ದರ್ಶನವಾಗಲಿಲ್ಲ. ಆದರೆ, ಪಾಂಡಿಚೇರಿ, ತಮಿಳುನಾಡಿನ ಪರಂಗಿಪೇಟೆ, ಗುಜರಾತ್ ನ ಲೂನವಾಡ, ನಡ್ಯಾಡ್, ಅಜ್ರಾಕ್‍ಪುರ್ ಮಂಗ್ರೋಲ್, ಕಚ್ ಸೇರಿದಂತೆ ಇನ್ನತರೆಡೆ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜೂ.17ರಂದು ಈದುಲ್ ಅಝ್ ಹಾ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಚಂದ್ರ ದರ್ಶನ ಸಮಿತಿಯ ಸದಸ್ಯ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


