ತುಮಕೂರು: 1965ರಿಂದ ಉಳುಮೆ ಮಾಡಿಕೊಂಡು ಬಂದಿದ್ದೇವೆ ಸ್ವಾಮಿ? ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಬದಲು ಒಂದು ತೊಟ್ಟು ವಿಷ ಕೊಟ್ಟುಬಿಡಿ ನೆಮ್ಮದಿಯಿಂದ ಪ್ರಾಣ ಬಿಡುತ್ತೇವೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾರ ಪುರ ಗ್ರಾಮದ ಸುಮಾರು ನೂರಕ್ಕೂ ಹೆಚ್ಚು ದಲಿತ ಕುಟುಂಬಗಳು ಅಳಲು ತೋಡಿಕೊಂಡಿದ್ದಾರೆ.
ನಮ್ಮ ತಾತ ಮುತ್ತಾತರ ಕಾಲದಿಂದಲೂ ನಾವು ಈ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದೇವೆ. ಈ ಜಮೀನಿನಲ್ಲಿ ಸುಮಾರು 73 ಜನರಿಗೆ ಜಮೀನು ಮಂಜೂರು ಮಾಡಿ ಕೊಟ್ಟಿರುತ್ತಾರೆ. ಇಲ್ಲಿ ನಾವು ತೆಂಗು, ಅಡಿಕೆ, ರಾಗಿ ಮುಂತಾದ ಬೆಳೆಗಳನ್ನು ಮೊದಲಿನಿಂದಲೂ ಬೆಳೆದುಕೊಂಡು ಬಂದಿದ್ದೇವೆ, ಇದರ ಬಗ್ಗೆ ಸುಮಾರು 50 ವರ್ಷದಿಂದ ಆಡಳಿತ ನಡೆಸುತ್ತಿರುವ ಶಾಸಕರುಗಳಿಗೆ ಗಮನಕ್ಕೆ ತಂದರು, ಯಾವ ಪಕ್ಷದ ಶಾಸಕರೂ ನಮ್ಮ ಅಳಲನ್ನು ಕೇಳುತ್ತಾ ಇಲ್ಲ, ವೋಟು ಕೇಳೋದಕ್ಕೆ ಮಾತ್ರ ಬರ್ತಾರೆ, ಆದರೆ ನಮ್ಮ ಸಮಸ್ಯೆ ಬಗೆಹರಿಸುವ ಕೆಲಸ ಯಾವ ಪಕ್ಷದ ಜನಪ್ರತಿನಿಧಿಯೂ ಮಾಡುತ್ತಾ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳು ಪಂಚಾಯತಿಯಲ್ಲಿ ನೋಟಿಸ್ ಅಂಟಿಸಿ ಹೋಗಿದ್ದಾರೆ, ಇವಾಗ ಅನುಭವದ ಮೇಲೆ ಉಳುವವನೇ ಭೂಮಿ ಒಡೆಯ ಎಂದು ಹೇಳುತ್ತಾರೆ. ಆದರೆ ಇಲ್ಲಿ ನೋಡಿದರೆ ನಮ್ಮನ್ನ ಒಕ್ಕಲಿಬ್ಬಿಸುವ ಕೆಲಸ ಮಾಡ್ತಾ ಇದ್ದಾರೆ, ನಮಗೆ ನ್ಯಾಯ ಕೊಡಿಸಿ ಇಲ್ಲವಾದರೆ ನಾವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಗ್ರಾಮಸ್ಥರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4