ಕೊರಟಗೆರೆ: ಕೆರೆಯಲ್ಲಿ ಈಜಲು ಬಂದಿದ್ದ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಪಟ್ಟಣದ ಹನುಮಂತಪುರದ ಪ್ರಿಯದರ್ಶಿನಿ ಕಾಲೇಜ್ ಹಿಂಭಾಗದಲ್ಲಿರುವ ಹೊಸಕೆರೆಯಲ್ಲಿ ನಡೆದಿದೆ.
ಬಿ ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿರುವ ಗೌತಮ್ ಸಿಂಗ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಒಟ್ಟು 12 ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ಹೋಗಿದ್ದು, ಈ ಪೈಕಿ ಇಬ್ಬರಿಗಷ್ಟೇ ಈಜು ಬರುತ್ತಿತ್ತು ಎನ್ನಲಾಗಿದೆ.
ಈಜು ಬರುತ್ತಿದ್ದವರು ಆಳ ನೀರಿನಲ್ಲಿ ಈಜುತ್ತಿದ್ದು, ಇದನ್ನು ಕಂಡ ಇತರ ವಿದ್ಯಾರ್ಥಿಗಳು ಕೂಡ ಆಳ ನೀರಿನತ್ತ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಏಕಾಏಕಿ ಗೌತಮ್ ಸಿಂಗ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy