ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ತಮ್ಮ ಮನೆ ಮೇಲೆ ನಡೆದ ಕಲ್ಲು ತೂರಾಟ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ ಯಡಿಯೂರಪ್ಪ, ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ. ಸಮುದಾಯದ ಹಿರಿಯ ಮುಖಂಡರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ. ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ ಎಂದರು.
ಬಂಜಾರ ಸಮುದಾಯದ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು 4 ಸಲ ಸಿಎಂ ಆಗಲು ಬಂಜಾರ ಸಮುದಾಯ ಕಾರಣ. ಬಂಜಾರ ಸಮುದಾಯದವರು ಶಾಂತಿಯಿಂದ ವರ್ತಿಸಬೇಕು. ಸಮಾಜಘಾತುಕ ವ್ಯಕ್ತಿಗಳ ಮಾತು ಕೇಳಬೇಡಿ. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಮಾತನಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


