ಚಿಕ್ಕಬಳ್ಳಾಪುರ: ತಾಲೂಕಿನ ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈತನನ್ನು ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ(37) ಎಂದು ಗುರುತಿಸಲಾಗಿದೆ.
ಇನ್ನು ಈತ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದನಂತೆ. ಈ ಹಿನ್ನಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇನ್ನು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


