ತುಮಕೂರು: ತುಮಕೂರು ತಾಲ್ಲೂಕು ಕೋರ ಗ್ರಾಮದ ಬಳಿಯಿರುವ ನಿರಾಶ್ರಿತರ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 75 ವರ್ಷದ ಮಂಜಣ್ಣ ಬಿನ್ ಶಿವಣ್ಣ ಎಂಬ ವಯೋವೃದ್ಧನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಜನವರಿ 2ರಂದು ಬೆಳಿಗ್ಗೆ 6:30 ಗಂಟೆಗೆ ಮೃತಪಟ್ಟಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ.
ಮೃತ ವ್ಯಕ್ತಿಯು 165 ಸೆಂ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ತೆಳ್ಳನೆಯ ಶರೀರ ಹೊಂದಿದ್ದು, ಮೃತನ ಮೈಮೇಲೆ ನೀಲಿ–ಹಳದಿ ಮಿಶ್ರಿತ ಅರ್ಧ ತೋಳಿನ ಅಂಗಿ ಹಾಗೂ ಬಲ ಮೊಣಕೈಯಲ್ಲಿ ಹಾವಿನ ಚಿತ್ರವಿರುವ ಹಚ್ಚೆ ಇರುತ್ತದೆ.
ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816–2278000/2272340/ 2275301/ 2242006, ಮೊ.ಸಂ.9480802900–20—31–49ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx