nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    • ಕೆರೆಯಲ್ಲಿ ಮುಳುಗಿ ಪಿಯುಸಿ ವಿದ್ಯಾರ್ಥಿ ಸಾವು: ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅರ್ಜುನ್
    • ಅಖಿಲ ಭಾರತ ಪ್ರತಿಭಟನಾ ದಿನ : AIDSO
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೃದ್ಧೆಯ ಚಿನ್ನಾಭರಣ ಕಳವು: ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು
    ಕೊರಟಗೆರೆ August 4, 2025

    ವೃದ್ಧೆಯ ಚಿನ್ನಾಭರಣ ಕಳವು: ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

    By adminAugust 4, 2025No Comments1 Min Read
    koratagere police

    ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ  ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮದಲ್ಲಿನ ದೇವಾಲಯಕ್ಕೆ ತೆರಳಿದ್ದ ವೃದ್ಧೆಯ ಚಲನ-ವಲನ ಗಮನಿಸಿ ವೃದ್ದೆಯು ಬಸ್ ಸ್ಟಾಂಡ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ವೃದ್ಧೆಯ ಗಮನವನ್ನು ಬೇರೆಡೆ ಸೆಳೆದು ಬ್ಯಾಗ್‌ ನಲ್ಲಿದ್ದ ಚಿನ್ನಾಭರಣವನ್ನು ಕದ್ದು ಪಾರಾರಿಯಾಗಿದ್ದರು.

    ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಂಡು, ತನಿಖೆ ನಡೆಸಿದ ಕೊರಟಗೆರೆ ಪೊಲೀಸ್ ತಂಡ ಮಿಂಚಿನ ಕಾರ್ಯಚರಣೆ ಮೂಲಕ ಎರಡೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

    ತಾಲ್ಲೂಕಿನ ಹೂಲೀಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವರಹಳ್ಳಿ ಗ್ರಾಮದ ಬಸಮ್ಮ ಎಂಬ ವೃದ್ಧೆಯು ಸಿದ್ದರಬೆಟ್ಟದ ದೇವಸ್ಥಾನಕ್ಕೆ ಬಂದಿದ್ದರು, ಇವರ ಗಮನ ಬೇರೆಡೆ ಸೆಳೆದು ವೃದ್ಧೆಯನ್ನು ಯಾಮಾರಿಸಿ ಬ್ಯಾಗ್ ನಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಕದ್ದು ಪಾರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡು ವೃದ್ಧೆಗೆ ಹಿಂತಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

    ಆರೋಪಿಗಳಾದ ರಂಗರಾಜು ಮತ್ತು ಶ್ರೀದೇವಿ ಶಿರಾ ತಾಲ್ಲೂಕಿನ ಮೂಕನಹಳ್ಳಿ ಗ್ರಾಮದ ವಾಸಿಗಳು ಎಂದು ತಿಳಿದು ಬಂದಿದೆ. ಪ್ರಕರಣ ಬೇಧಿಸಿದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

    ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್ ಮಾರ್ಗದರ್ಶದಂತೆ ಪಿಎಸ್‌ಐ ತೀರ್ಥೇಶ್ ನೇತೃತ್ವದ ಪೋಲಿಸರ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

    ಈ ಕಾರ್ಯಾಚರಣೆಯಲ್ಲಿ ಎಎಸ್‌ ಐ ಗಂಗಾಧರಪ್ಪ ಸಿಬ್ಬಂದಿಗಳಾದ ದೊಡ್ಡಲಿಂಗಯ್ಯ,ಮೋಹನ್, ಸಂಜೀವರೆಡ್ಡಿ, ರಾಮಚಂದ್ರ, ರವಿ, ಜಗದೀಶ್, ಪ್ರದೀಪ್ ಮೊದಲಾದವರು ಭಾಗಿಯಾಗಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

    October 12, 2026

    ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ತುರ್ತು ಪರಿಸ್ಥಿತಿಯೇ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಉತ್ತರ ನೀಡಬೇಕು…

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.